ಪರಿಸರ ಮತ್ತು ಅರಣ್ಯ ಸಚಿವಾಲಯ

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಭೂಪೇಂದ್ರ ಯಾದವ್

ಪ್ರಕಟಣಾ ದಿನಾಂಕ: 08 JUL 2021 4:10PM by PIB Bengaluru

ಶ್ರೀ ಭೂಪೇಂದ್ರ ಯಾದವ್ ಅವರು ಇಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದರು. ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಾಗಿ ಕೆಲಸ ಮಾಡಲು ತಮಗೆ ಅವಕಾಶ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಹೇಳುವುದಾಗಿ ತಿಳಿಸಿದರು. ಪ್ರಧಾನಮಂತ್ರಿ ಅವರು ನೀಡಿರುವ ಎಲ್ಲ ಜವಾಬ್ದಾರಿಗಳನ್ನು ಪೂರೈಸಲು ಎಲ್ಲ ಪ್ರಯತ್ನ ನಡೆಸುತ್ತೇನೆ ಎಂದು ಶ್ರೀ ಯಾದವ್ ಹೇಳಿದರು.

 

ಶ್ರೀ ಯಾದವ್ ಅವರು ಅಧಿಕಾರ ಸ್ವೀಕರಿಸುವ ಮುನ್ನ, ನವದೆಹಲಿಯಲ್ಲಿಂದು ಪರಿಸರ ಸಚಿವಾಲಯದ ಆವರಣದಲ್ಲಿ ಸಸಿಯನ್ನು ನೆಟ್ಟರು.

ಸಚಿವರನ್ನು ಇಎಫ್ ಮತ್ತು ಸಿಸಿ ಕಾರ್ಯದರ್ಶಿ ಶ್ರೀ ರಾಮೇಶ್ವರ್ ಪ್ರಸಾದ್ ಗುಪ್ತಾ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

  

  

 

***


(ಪ್ರಕಟಣೆ ಐ.ಡಿ.: 1733960) ವಿಸಿಟರ್ ಕೌಂಟರ್ : 318
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Tamil