ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಗೆ ಪ್ರಧಾನಿ ಸಂತಾಪ
ಸಂತ್ರಸ್ತರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ನೀಡಲು ಪ್ರಧಾನಿ ಅನುಮೋದನೆ
ಪ್ರಕಟಣಾ ದಿನಾಂಕ:
07 OCT 2021 11:35AM by PIB Bengaluru
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಪ್ರಾಣ ಹಾನಿ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಸಂತ್ರಸ್ತರಿಗಾಗಿ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ಈ ಕುರಿತು ಹೀಗೆ ಟ್ವೀಟ್ ಮಾಡಿದೆ:
"ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ದುಃಖಿತನಾಗಿದ್ದೇನೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರೊಂದಿಗೆ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ʻಪಿಎಂಎನ್‌ಆರ್‌ಎಫ್ʼನಿಂದ ತಲಾ 2 ಲಕ್ಷ ರೂ.ಗಳನ್ನು ಮೃತರ ಕುಟುಂಬಕ್ಕೆ ಮತ್ತು 50,000 ರೂ.ಗಳನ್ನು ಗಾಯಗೊಂಡವರಿಗೆ ನೀಡಲಾಗುವುದು: ಪ್ರಧಾನಿ @narendramodi".
***
(ಪ್ರಕಟಣೆ ಐ.ಡಿ.: 1761683)
ವಿಸಿಟರ್ ಕೌಂಟರ್ : 245
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam