ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಯು.ಎ.ಇ. ಅಧ್ಯಕ್ಷರಾದ ಶೇಖ್ ಖಲೀಫಾ ಬಿನ್ ಜಾಯೆದ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ
                    
                    
                        
                    
                
                
                    Posted On:
                13 MAY 2022 6:14PM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್ (ಯು.ಎ.ಇ.) ಅಧ್ಯಕ್ಷರಾದ ಘನತೆವೆತ್ತ ಶೇಖ್ ಖಲೀಫಾ ಬಿನ್ ಜಾಯೆದ್ ಅವರ ನಿಧನದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಅವರು ಭಾರತ-ಯು.ಎ.ಇ. ಬಾಂಧವ್ಯ ಉತ್ತಮಗೊಳ್ಳಲು ಆಸಕ್ತಿ ಹೊಂದಿದ ಮಹಾನ್ ರಾಜನೀತಿಜ್ಞ ಮತ್ತು ದೂರದೃಷ್ಟಿಯ ನಾಯಕ ಎಂದು ಪ್ರಧಾನಮಂತ್ರಿ ಅವರು ಹೇಳಿದರು.
 ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ;
 "ಘನತೆವೆತ್ತ ಶೇಖ್ ಖಲೀಫಾ ಬಿನ್ ಜಾಯೆದ್ ಅವರ ನಿಧನದ ಬಗ್ಗೆ ತಿಳಿದು ನನಗೆ ಅತೀವ ದುಃಖವಾಗಿದೆ. ಅವರು ಶ್ರೇಷ್ಠ ರಾಜಕಾರಣಿ ಮತ್ತು ದೂರದೃಷ್ಟಿಯ ನಾಯಕರಾಗಿದ್ದರು ಹಾಗೂ ಅವರ ಅವಧಿಯಲ್ಲಿ ಭಾರತ-ಯು.ಎ.ಇ. ನಡುವಿನ ಬಾಂಧವ್ಯ ಸಮೃದ್ಧವಾಗಿ ಅಭಿವೃದ್ಧಿ ಹೊಂದಿದೆ. ಭಾರತದ ಜನರ ಹೃತ್ಪೂರ್ವಕ ಸಂತಾಪಗಳು ಯು.ಎ.ಇ. ಜನರೊಂದಿಗೆ ಇವೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ."
 ***
                
                
                
                
                
                (Release ID: 1825187)
                Visitor Counter : 234
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Assamese 
                    
                        ,
                    
                        
                        
                            Manipuri 
                    
                        ,
                    
                        
                        
                            Bengali 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam