ಹಣಕಾಸು ಸಚಿವಾಲಯ
ಆರ್ಥಿಕ ಸೇರ್ಪಡೆ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ; ಪ್ರಮುಖ ಯೋಜನೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲರಿಗೂ ಕೈಗೆಟುಕುವ ವಿಮೆ ಮತ್ತು ಆರೋಗ್ಯ ರಕ್ಷಣೆಯನ್ನು ಒದಗಿಸಿವೆ
ವಿಮಾ ನೋಂದಣಿಗಾಗಿ ಹಣಕಾಸು ಸೇರ್ಪಡೆ ಪರಿಪೂರ್ಣತಾ ಅಭಿಯಾನವು 2.7 ಲಕ್ಷ ಪಂಚಾಯತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳನ್ನು ತಲುಪಿದೆ
ಪಿಎಂಜೆಜೆಬಿವೈ ಮತ್ತು ಪಿ ಎಂ ಎಸ್ ಬಿ ವೈ ಯೋಜನೆಗಳ ಕುರಿತು ಎಲ್ಲಾ ಮಾಹಿತಿಯನ್ನು ಒದಗಿಸಲು ಜನಸುರಕ್ಷಾ ಪೋರ್ಟಲ್ ಅನ್ನು ರೂಪಿಸಲಾಗಿದೆ
Posted On:
18 AUG 2025 5:04PM by PIB Bengaluru
ಭಾರತೀಯ ವಿಮಾ ಕಂಪನಿಗಳಲ್ಲಿ ವಿದೇಶಿ ನೇರ ಹೂಡಿಕೆಯನ್ನು ಶೇ.74 ರಿಂದ ಶೇ.100 ಕ್ಕೆ ಹೆಚ್ಚಿಸುವುದಾಗಿ ಫೆಬ್ರವರಿ 1, 2025 ರಂದು ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾಯಿತು.
ಸಾರ್ವತ್ರಿಕ ಮತ್ತು ಕೈಗೆಟುಕುವ ಸಾಮಾಜಿಕ ಭದ್ರತಾ ವ್ಯವಸ್ಥೆಯನ್ನು ರಚಿಸಲು, ವಿಶೇಷವಾಗಿ ಬಡವರು ಮತ್ತು ದುರ್ಬಲರಿಗೆ, ಭಾರತ ಸರ್ಕಾರವು ಪ್ರಮುಖ ವಿಮಾ ಯೋಜನೆಗಳನ್ನು ಪ್ರಾರಂಭಿಸಿದೆ, ಅವುಗಳೆಂದರೆ:
- ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) 18-50 ವರ್ಷ ವಯಸ್ಸಿನ ಜನರಿಗಾಗಿ ಇದೆ. ಯಾವುದೇ ಕಾರಣದಿಂದಾಗಿ ವಿಮೆ ಮಾಡಿದ ವ್ಯಕ್ತಿಯು ಸಾವನ್ನಪ್ಪಿದರೆ, 2 ಲಕ್ಷ ರೂ.ಗಳ ವಿಮಾ ರಕ್ಷಣೆಯನ್ನು ನೀಡುತ್ತದೆ. ಇದರ ವಾರ್ಷಿಕ ಪ್ರೀಮಿಯಂ436 ರೂ.
- ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿ ಎಂ ಎಸ್ ಬಿ ವೈ) 18-70 ವರ್ಷ ವಯಸ್ಸಿನ ಜನರಿಗಾಗಿ ಇದೆ. ಅಪಘಾತದಿಂದ ಮರಣ ಅಥವಾ ಸಂಪೂರ್ಣ ಶಾಶ್ವತ ಅಂಗವೈಕಲ್ಯ ಉಂಟಾದರೆ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆಯನ್ನು ಮತ್ತು ಅಪಘಾತದಿಂದ ಭಾಗಶಃ ಶಾಶ್ವತ ಅಂಗವೈಕಲ್ಯ ಉಂಟಾದರೆ 1 ಲಕ್ಷ ರೂಪಾಯಿಗಳ ವಿಮಾ ರಕ್ಷಣೆಯನ್ನು ಒದಗಿಸುತ್ತದೆ, ಇದಕ್ಕೆ ವರ್ಷಕ್ಕೆ 20 ರೂಪಾಯಿಗಳ ಪ್ರೀಮಿಯಂ ಪಾವತಿಸಬೇಕಾಗುತ್ತದೆ.
- ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ದ್ವಿತೀಯ ಮತ್ತು ತೃತೀಯ ಹಂತದ ಆರೈಕೆಗಾಗಿ ಆಸ್ಪತ್ರೆಗೆ ದಾಖಲು ಮಾಡಲು ಪ್ರತಿ ಕುಟುಂಬಕ್ಕೆ ವರ್ಷಕ್ಕೆ ₹5 ಲಕ್ಷ ಆರೋಗ್ಯ ರಕ್ಷಣೆಯನ್ನು ನೀಡುತ್ತದೆ.
- ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿ ಎಂ ಎಫ್ ಬಿ ವೈ) ರೈತರಿಗೆ ಅನಿರೀಕ್ಷಿತ ನೈಸರ್ಗಿಕ ವಿಪತ್ತುಗಳಿಂದ ಉಂಟಾಗುವ ಬೆಳೆ ನಷ್ಟದ ವಿರುದ್ಧ ರಕ್ಷಣೆ ನೀಡುತ್ತದೆ. ಈ ಯೋಜನೆಯಡಿಯಲ್ಲಿ, ರೈತರು ಪಾವತಿಸುವ ಪ್ರೀಮಿಯಂ ಅನ್ನು ಖಾರಿಫ್ ಬೆಳೆಗಳಿಗೆ ಶೇ.2, ರಬಿ ಬೆಳೆಗಳಿಗೆ ಶೇ.1.5 ಮತ್ತು ವಾಣಿಜ್ಯ/ತೋಟಗಾರಿಕಾ ಬೆಳೆಗಳಿಗೆ ಶೇ.5 ಕ್ಕೆ ಮಿತಿಗೊಳಿಸಲಾಗಿದೆ.
ಈ ಯೋಜನೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಭಾರತದ ಎಲ್ಲಾ ಅರ್ಹ ನಾಗರಿಕರಿಗೆ ಮುಕ್ತವಾಗಿವೆ.
ಇದಲ್ಲದೆ, ಪಿಎಂಜೆಜೆಬಿವೈ ಮತ್ತು ಪಿ ಎಂ ಎಸ್ ಬಿ ವೈ ಅಡಿಯಲ್ಲಿ ವ್ಯಾಪ್ತಿ ಮತ್ತು ಸಂಪರ್ಕವನ್ನು ಹೆಚ್ಚಿಸುವ ಸಲುವಾಗಿ, 01.07.2025 ರಿಂದ 2.70 ಲಕ್ಷ ಗ್ರಾಮ ಪಂಚಾಯತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ "ಹಣಕಾಸು ಸೇರ್ಪಡೆ ಪರಿಪೂರ್ಣತಾ ಅಭಿಯಾನ" ಸೇರಿದಂತೆ ಬ್ಯಾಂಕುಗಳು ಮತ್ತು ಸ್ಥಳೀಯ ಆಡಳಿತದ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ತಳಮಟ್ಟದಲ್ಲಿ ನಿಯಮಿತ ಅಭಿಯಾನಗಳು ಮತ್ತು ಈ ಯೋಜನೆಗಳಿಗೆ ಸಂಬಂಧಿಸಿದ ಎಲ್ಲಾ ಸಂಬಂಧಿತ ಸಾಮಗ್ರಿ/ಮಾಹಿತಿಯನ್ನು ಒದಗಿಸಲು ಜನಸುರಕ್ಷಾ ಪೋರ್ಟಲ್ (http://www.jansuraksha.gov.in) ಅನ್ನು ರಚಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಇದಲ್ಲದೆ, ಬ್ಯಾಂಕಿಂಗ್ ಸೇವೆಗಳ ವಿತರಣಾ ವ್ಯವಸ್ಥೆಯಲ್ಲಿ ಕೊನೆಯ ಹಂತದ ಸಂಪರ್ಕವನ್ನು ಪ್ರತಿನಿಧಿಸುವ ಸುಮಾರು 16 ಲಕ್ಷ ಬ್ಯಾಂಕಿಂಗ್ ಕರೆಸ್ಪಾಂಡೆಂಟ್ಸ್ ಗಳ ಬಲವಾದ ಜಾಲವು ಈ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಒಳಗೊಂಡಂತೆ ಎಲ್ಲಾ ಅರ್ಹ ನಾಗರಿಕರನ್ನು ದಾಖಲಿಸಲು ಜಾರಿಯಲ್ಲಿದೆ.
ಇದಲ್ಲದೆ, ಈ ಯೋಜನೆಗಳ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕುಗಳಿಗೆ ಗುರಿಗಳ ಹಂಚಿಕೆ ಮತ್ತು ನಿಯಮಿತ/ಆವರ್ತಕ ಪರಿಶೀಲನೆಯನ್ನು ಮಾಡಲಾಗುತ್ತಿದೆ. ಈ ಸಂಘಟಿತ ಪ್ರಯತ್ನಗಳು ಪ್ರತಿಯೊಬ್ಬ ಅರ್ಹ ನಾಗರಿಕರನ್ನು, ವಿಶೇಷವಾಗಿ ಸಮಾಜದ ದುರ್ಬಲ ವರ್ಗಗಳವರನ್ನು ಕೈಗೆಟುಕುವ ಸಾಮಾಜಿಕ ಭದ್ರತೆಯ ಸುರಕ್ಷತಾ ಜಾಲದ ಅಡಿಯಲ್ಲಿ ತರುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ.
ಲೋಕಸಭೆಯಲ್ಲಿ ಇಂದು ಹಣಕಾಸು ರಾಜ್ಯ ಸಚಿವರಾದ ಶ್ರೀ ಪಂಕಜ್ ಚೌಧರಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.
*****
(Release ID: 2157856)
Visitor Counter : 5