ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂವಿಧಾನ ದಿನದಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ

प्रविष्टि तिथि: 26 NOV 2025 10:50PM by PIB Bengaluru

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನ ದಿನದಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿರುವುದಕ್ಕೆ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಈ ಐತಿಹಾಸಿಕ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಮತ್ತು ಭಾರತದ ಸಂವಿಧಾನ ರಚನೆಯಲ್ಲಿ ಅವರ ಪ್ರಮುಖ ಪಾತ್ರವನ್ನು ಗುರುತಿಸುವುದು ಅವರಿಗೆ ಸಂದ ಸೂಕ್ತ ಗೌರವವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಡಾ. ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಆದರ್ಶಗಳು ವಿಶ್ವದಾದ್ಯಂತ ಅಸಂಖ್ಯಾತ ಜನರಿಗೆ ಶಕ್ತಿ ಮತ್ತು ಭರವಸೆಯನ್ನು ನೀಡುತ್ತಲೇ ಇವೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:

”ಸಂವಿಧಾನ ದಿನವಾದ ಇಂದು ಪ್ಯಾರಿಸ್‌ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯಲ್ಲಿ ಅನಾವರಣಗೊಳಿಸಲಾಗಿದೆ ಎಂಬುದು ಅಪಾರ ಹೆಮ್ಮೆಯ ವಿಷಯವಾಗಿದೆ. ಇದು ಡಾ. ಅಂಬೇಡ್ಕರ್ ಮತ್ತು ನಮ್ಮ ಸಂವಿಧಾನ ರಚನೆಯಲ್ಲಿ ಅವರು ವಹಿಸಿದ ಪಾತ್ರಕ್ಕೆ ಸಂದ ಸೂಕ್ತ ಗೌರವವಾಗಿದೆ. ಅವರ ಚಿಂತನೆಗಳು ಮತ್ತು ಆದರ್ಶಗಳು ಅಸಂಖ್ಯಾತ ಜನರಿಗೆ ಶಕ್ತಿ ಮತ್ತು ಭರವಸೆಯನ್ನು ನೀಡುತ್ತಿವೆ’’.

@UNESCO

@IndiaatUNESCO”

 

*****


(रिलीज़ आईडी: 2195318) आगंतुक पटल : 20
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Malayalam